ಬೆಂಗಳೂರು:- ಅಡ್ಡಮತದಾನ ಹಿನ್ನೆಲೆ, ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್ಗೆ ದೂರು ನೀಡಲು ಬಿಜೆಪಿ ಮುಂದಾಗಿದೆ.
ಎಸ್ಟಿ ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಮತದಾನ ಹಾಕಿದ್ದು, ಇನ್ನೊಬ್ಬ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಆಗಮಿಸದೆ ಗೈರಾಗಿದ್ದಾರೆ. ಸದ್ಯ, ಈ ಇಬ್ಬರು ನಾಯಕರ ವಿರುದ್ಧ ಕ್ರಮಕ್ಕೆ ಮುಂದಾದ ರಾಜ್ಯ ಬಿಜೆಪಿ ನಾಯಕರು ನಾಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ಗೆ ದೂರು ನೀಡಲು ಮುಂದಾಗಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಎಸ್.ಟಿ.ಸೋಮಶೇಖರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸ್ಪೀಕರ್ ಯುಟಿ ಖಾದರ್ಗೆ ದೂರು ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಹೀಗೆ ದೂರು ನೀಡಲು ಬಿಜೆಪಿಗೆ 15 ದಿನಗಳ ಕಾಲಾವಕಾಶವಿದೆ. ಒಂದು ವೇಳೆ ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ಕೋರ್ಟ್ ಮೊರೆ ಹೋಗಲು ಬಿಜೆಪಿ ನಾಯಕರು ಚಿಂತಿಸಿದ್ದಾರೆ.
ಎಸ್ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ವಿಪ್ ಉಲ್ಲಂಘನೆ ಮಾಡಿದ ಕುರಿತು ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್ಗೆ ಮಾಹಿತಿ ನೀಡಲು ಮುಂದಾಗಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪ್ರತ್ಯೇಕ ಮಾಹಿತಿ ನೀಡಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.