ಹೈದರಾಬಾದ್: ತೆಲಂಗಾಣದಲ್ಲಿ (Telangana) ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ 30 ನಿಮಿಷದಲ್ಲಿ ಹೈದರಾಬಾದ್ ಅನ್ನು ‘ಭಾಗ್ಯನಗರ್’ (Bhagya Nagar) ಎಂದು ಮರುನಾಮಕರಣ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಹೇಳಿಕೆಯೊಂದನ್ನು ನೀಡಿದ್ದಾರೆ.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಹೈದರಾಬಾದ್ನಲ್ಲಿ ಚುನಾವಣಾ ಪ್ರಚಾರದಲ್ಲಿನ (Election Rally) ತಮ್ಮ ಭಾಷಣದ ವೇಳೆ ಈ ಮಾತನ್ನು ಹೇಳಿದ್ದಾರೆ. ಹೈದರಾಬಾದ್ ಹೆಸರನ್ನು ಭಾಗ್ಯನಗರ್ ಎಂಬುದಾಗಿ ಮರುನಾಮಕರಣ ಮಾಡಬೇಕು ಎಂಬುದಾಗಿ ನಾನು ಅಂದುಕೊಂಡಿದ್ದೇನೆ. ಅದರಂತೆ ಬಿಜೆಪಿ (BJP) ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಮರುನಾಮಕರಣ ಮಾಡುತ್ತೇನೆ. ಇದನ್ನು ಯಾರೂ ಕೂಡ ವಿರೋಧಿಸುವ ಧೈರ್ಯ ಮಾಡಲ್ಲ ಎಂದರು.
ಕೆಲವು ವಿಷಯಗಳು ಅಸಾಧ್ಯವೆಂದು ತೋರುತ್ತದೆ. ಓಲ್ಡ್ ಸಿಟಿಗೆ ಮೆಟ್ರೋ ರೈಲು ವ್ಯವಸ್ಥೆ ಕಲ್ಪಿಸಬಹುದೇ? ಕೆಲವು ಜನರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗುತ್ತದೆಯೇ?, ಇನ್ನೂ ಕೆಲವರು ಬಹಿರಂಗವಾಗಿ ಪೊಲೀಸರಿಗೆ ಬೆದರಿಕೆ ಹಾಕಿದಾಗ ನಾವು ಅದನ್ನು ತಡೆಯಬಹುದೇ? ಎಂದು ಇತ್ತೀಚೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಕ್ಬರುದ್ದೀನ್ ಓವೈಸಿ ಅವರನ್ನು ಒಳಗೊಂಡ ಘಟನೆಯನ್ನು ಉಲ್ಲೇಖಿಸಿ ಹೇಳಿದರು.