ಬೆಳಗಾವಿ: ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿ ನಗರದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಏಕಾಏಕಿ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ಕೂಡ ನಡೆಯಿತು. ಬಳಿಕ 30ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಇದಕ್ಕೂ ಮೊದಲು ನಗರದ ಚೆನ್ನಮ್ಮ ವೃತ್ತದಲ್ಲಿ ಎಮ್ಮೆಗಳನ್ನು ರಸ್ತೆಗೆ ತಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ (Anil Benake) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.