ಹುಬ್ಬಳ್ಳಿ: ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಿರುವ ಹಿಂದೂ ಕಾರ್ಯಕರ್ತನನ್ನು ಬಂಧನ ಮುಕ್ತಗೊಳಿಸುವವರೆಗೂ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ತಿಳಿಸಿದರು. ನಗರದ ಶಹರ ಠಾಣೆ ಎದುರು ಬಿಜೆಪಿ ಮುಖಂಡರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು, ‘ಹಿಂದೂ ಕಾರ್ಯಕರ್ತರು ಹೆದರುವ ಅವಶ್ಯಕತೆ ಇಲ್ಲ. ಹಲವರು ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ಮಾಡಿದ್ದಾರೆ.
ಹಲವರ ವಿರೋಧದ ನಡುವೆಯೂ ಮಂದಿರ ನಿರ್ಮಾಣವಾಗಿದೆ. ಮಂದಿರ ಉದ್ಘಾಟನೆಗೆ ತೊಡಕುಂಟುಮಾಡಲು ರಾಜ್ಯ ಸರ್ಕಾರ ಇಂತಹ ಕೆಲಸ ಮಾಡಿದೆ’ ಎಂದು ಆರೋಪಿಸಿದರು. ಹಿಂದೂಗಳ ಮೇಲೆ ದಬ್ಬಾಳಿಕೆ ಮುಂದುವರಿದರೆ ಉಗ್ರ ಹೋರಾಟ ಮಾಡೇ ತೀರುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಜೈ ಶ್ರೀರಾಮ್, ಹಿಂದೂ ವಿರೋಧಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹಸಚಿವ ಪರಮೇಶ್ವರ್, ಪೊಲೀಸ್ ಇನ್ಸ್ ಪೆಕ್ಟರ್ಗೆ ಧಿಕ್ಕಾರ ಘೋಷಣೆಗಳು ಮೊಳಗಿದವು. ‘ಹಿಂದೂ ಭಕ್ತ ಅಚ್ಚಾ ಹೈ, ಸಿದ್ರಾಮಯ್ಯ ಲುಚ್ಚ ಹೈ’ ಎಂದೂ ಆಕ್ರೋಶ ವ್ಯಕ್ತಪಡಿಸಿದರು.