ಕೋಲಾರ : ಕಾಂಗ್ರೆಸ್ ಸರ್ಕಾರ ಎಸ್ ಟಿ ಪಿ ಮತ್ತು ಟಿಎಸ್ಪಿ ಅನುದಾನವನ್ನು ಉಚಿತ ಭಾಗ್ಯಗಳಿಗೆ ಬಳಕೆ ಮಾಡುತ್ತಿರುವುದನ್ನು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ಕೋಲಾರ ನಗರದ ನಚಿಕೇತನ ನಿಲಯದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರ್ಯಾಲಿಗೆ ಚಾಲನೆ ನೀಡಲಾಯಿತು. ನಚಿಕೇತನಿಲಯದಿಂದ ಮೆಕ್ಕೆ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದು, ನಂತರ ಹೊಸ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಾಯಿತು. ಮಾಜಿ ಸಂಸದರಾದ ಎ.ನಾರಾಯಣಸ್ವಾಮಿ ಎಸ್.ಮುನಿಸ್ವಾಮಿ, ನಂದೀಶ್ ರೆಡ್ಡಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.