ಬೆಂಗಳೂರು: ಹೆಣ್ಣು ಭ್ರೂಣ ಹತ್ಯೆ ನಿಲ್ಲಲಿ ಎಂದು ಬಿಜೆಪಿ ಬೆಂಗಳೂರು ಮಹಾನಗರ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ಮಾಡಲಾಗಿದೆ. ಬೆಂಗಳೂರಿನ ಮೇಖ್ರಿ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಗೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಬಿಜೆಪಿ ಮಹಿಳಾ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಗೀತಾ, ಜಿಲ್ಲಾಧ್ಯಕ್ಷರಾದ ಶ್ರೀಮತಿ ಆಶಾ ರಾವ್ ಸೇರಿದಂತೆ ಭಾಗಿಯಾಗಿದ್ದರು. ಬೃಹತ್ ಪ್ರತಿಭಟನೆಗೆ ನೂರಾರು ಬಿಜೆಪಿ ಮಹಿಳೆಯರು ಭಾಗಿಯಾಗಿದ್ದರು.
ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು. ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಭ್ರೂಣ ಹತ್ಯೆ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟನೆ ಜೊತೆಗೆ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ.