ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ ಎಂದು ಬಿ.ಕೆ.ಹರಿಪ್ರಸಾದ್ ಟೀಕೆ ಮಾಡಿದ್ದಾರೆ
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರೌಡಿ ಶೀಟರ್ ಆಗಿರುವ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ “ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ.ಕೋಮು ಗಲಭೆ ನಡೆಸಿ 2024ಕ್ಕೆ “ವಿಶ್ವಗುರುವನ್ನ” ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ.
ರಾಜ್ಯದಲ್ಲಿ ಎಲ್ಲಿ?ಯಾವಾಗಾ?ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಇಂತಹ ಸಮಾಜಘಾತುಕರಿಗೆ ಇಡಿ ಬಿಜೆಪಿಯೇ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು. ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನ ಮಟ್ಟ ಹಾಕಬೇಕು. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇನೆ.