ಬೆಂಗಳೂರು: ಬಿಜೆಪಿಯ ಬಣ ಬಡಿದಾಟ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಚರ್ಚೆ ಮಧ್ಯೆಯೇ ಇದೀಗ ಬಿಎಸ್ವೈ ಆಪ್ತರ ಬಣ ಸಭೆ ನಡೆಸಿದೆ. ಮಾಜಿ ಶಾಸಕ ಕಟ್ಟಾ ಸುಬ್ರಮಣ್ಯ ನಿವಾಸದಲ್ಲಿ ಯಡಿಯೂರಪ್ಪ ಆಪ್ತರ ಸಭೆ ನಡೆಯುತ್ತಿದೆ. ರಾಜ್ಯಾಧ್ಯಕ್ಷರ ಚುನಾವಣೆ ಸಂಬಂಧ ಶಾಸಕರು ಮತ್ತು ಸಂಸದರ ಅಭಿಪ್ರಾಯ ಪಡೆಯಲು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲಾ ಆಗಮಿಸಿಲಿದ್ದಾರೆ. ಹೀಗಾಗಿ ಇಂದು ಮಾಜಿ ಶಾಸಕರು ಸದಾಶಿವನಗರದಲ್ಲಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ..
ಸುವರ್ಣಸೌಧದಲ್ಲಿ ಬಾಪೂ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಮಲ್ಲಿಕಾರ್ಜುನ ಖರ್ಗೆ
ವಿಜಯೇಂದ್ರ ಅವರನ್ನು ಮುಂದುವರಿಸುವಂತೆ ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ಸಭೆ ಬಳಿಕ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯನ್ನು ಮುಂದುವರಿಸುವಂತೆ ರಾಧಾ ಮೋಹನ್ ದಾಸ್ ಅಗರವಾಲಾಗೆ ಮನವಿ ಮಾಡಿಕೊಳ್ಳಲಿದ್ದಾರೆ. ಸಭೆಯಲ್ಲಿ ಮಾಜಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ ನಾಯ್ಡು, ಬಸವರಾಜ್ ದಡೇಸುಗೂರು, ಬಸವರಾಜ್ ನಾಯ್ಕ್, ಹರ್ತಾಳ್ ಹಾಲಪ್ಪ, ಜೀವರಾಜ್, ಮಾಜಿ ಶಾಸಕಿ ರೂಪಾಲಿ ನಾಯಕ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ