ಬೆಂಗಳೂರು: ಬಿ.ವೈ.ವಿಜಯೇಂದ್ರಗೆ (Vijayendra) ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ. ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ.
ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಗುರಿ ಇಟ್ಟಿದ್ದೇವೆ: ಬಿ.ಎಸ್.ಯಡಿಯೂರಪ್ಪ
ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ (Somanna) ನಿರಾಕರಿಸಿದ್ದು, ಮೌನವಾಗಿದ್ದರು. ವಿಜಯೇಂದ್ರ ಅಧ್ಯಕ್ಷ ಪಟ್ಟ ವಿಚಾರವನ್ನು ಸೋಮಣ್ಣ ಒಪ್ಪಿಕೊಳ್ಳುತ್ತಾರಾ ಅಥವಾ ಇಲ್ಲವಾ ಎಂಬುದು ಪ್ರಶ್ನೆಯಾಗಿದ್ದು, ಅವರ ನಡೆ ಕುತೂಹಲ ಮೂಡಿಸಿದೆ.
ವಿಜಯೇಂದ್ರ ಆಯ್ಕೆ ಕುರಿತು ಮಾಧ್ಯಮದವರು ಕೇಳಿದಾಗ ಸೋಮಣ್ಣ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ನಾನೇ ಸುದ್ದಿಗೋಷ್ಠಿ ಮಾಡ್ತೀನಿ ಎಂದಷ್ಟೇ ಹೇಳಿದವರು, ಮುಂದೆ ಒಂದು ಮಾತು ಕೂಡ ಆಡದೇ ಕಾರು ಹತ್ತಿ ಹೊರಟು ಹೋದರು.