ಬೆಂಗಳೂರು : ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Ramesh Jarakiholi: ಅಸಮಾಧಾನ ಇತ್ತು, ಏನು ಅಂತ ಈಗ ಹೇಳಕ್ಕೆ ಬರಲ್ಲ: ರಮೇಶ್ ಜಾರಕಿಹೊಳಿ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಯಾವಾಗ ಚುನಾವಣೆ ಆಗುತ್ತೋ ಆಗ ಅವರು ಮನೆಗೆ ಹೋಗ್ತಾರೆ. ಇಂದು ಚುನಾವಣೆ ನಡೆದರೂ ನಾವು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ನಿವಾಸಕ್ಕೆ ಬಿ.ವೈ. ವಿಜಯೇಂದ್ರ ಹೋಗಿದ್ದರ ಬಗ್ಗೆ ಮಾತನಾಡಿದ ಅವರು, ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕ, ವಿಜಯೇಂದ್ರರನ್ನು ಅಧ್ಯಕ್ಷ ಮಾಡಿದ್ದೇವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಲ್ಲಾರೂ ಸೇರಿ ಪಕ್ಷವನ್ನು ಮುನ್ನಡೆಸುತ್ತೇವೆ. ವಿಜಯೇಂದ್ರ, ಅಶೋಕ್ ಎಲ್ಲಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ತಿಳಿಸಿದ್ದಾರೆ.