ವಿಜಯಪುರ: ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ. ಮೊದಲ ಹಂತದ ಚುನಾವಣೆಯಲ್ಲಿ ನಿರೀಕ್ಷಿತ ಮತಗಳು ಬರುವುದಿಲ್ಲ ಎಂದು ಹತಾಶರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತ ಯಾಚನೆ ಮಾಡಿ ಮಾತನಾಡಿದರು.
Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ.! 10th ಪಾಸಾಗಿದ್ರೆ ಸಾಕು – ಇಂದೇ ಅರ್ಜಿ ಸಲ್ಲಿಸಿ
ನರೇಂದ್ರ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು, ದಲಿತರು, ಅಲ್ಪಸಂಖ್ಯಾತ ಪರವಾಗಿ ಕೆಲಸ ಮಾಡಿಲ್ಲ. ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ. ಅವರು ಸಾಧನೆಗಳನ್ನು ಹೇಳದೆ ಭಾವನೆಗಳನ್ನು ಕೆರಳಿಸಿ,
ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ. ಇತ್ತೀಚಿನ ಅವರ ಭಾಷಣಗಳನ್ನು ಗಮನಿಸಿದರೆ ಮೊದಲ ಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಅವರು ಹತಾಶರಾಗಿದ್ದಾರೆ. ಸಂಬಂಧ ಪಡದ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದರು