ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು. ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ನಡೆಯುತ್ತಿದೆ. ಮೊದಲ ಸುತ್ತು ಮುಗಿಸಿದ್ದೇನೆ. ಜಿಲ್ಲೆಯ ಎಲ್ಲ ಕ್ಷೇತ್ರದಲ್ಲೂ ಪ್ರಚಾರ ಮಾಡುತ್ತಿದ್ದೇನೆ.
ಬೆಳಗ್ಗೆ ಚಾಯ್ ಪೆ ಚರ್ಚಾ ಕಾರ್ಯಕ್ರಮ ಬಹಳ ಪರಿಣಾಮಕಾರಿಯಾಗಿ ನಡೆಯುತ್ತಿದೆ. ನಾವು ಏನು ಮಾಡುತ್ತೇವೋ ಅದನ್ನು ತಲುಪಿಸಲು ಮಾಧ್ಯಮ ಕೇಂದ್ರ ತೆರೆದಿದ್ದೇವೆ. ಈ ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ಲುತ್ತದೆ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಖಾಯಿಲೆ ಇರುವವರು ಪೇರಳೆ ಹಣ್ಣು ತಿನ್ನಲೇಬೇಡಿ..! ಅಪಾಯ ಕಟ್ಟಿಟ್ಟಬುತ್ತಿ
ಏ.17ರಂದು ಶೆಟ್ಟರ್ ನಾಮಪತ್ರ: ಇದೇ 17ರಂದು ನಾಮಪತ್ರ ಸಲ್ಲಿಸುತ್ತೇನೆ. ಅಂದು ದೊಡ್ಡ ಪ್ರಮಾಣದಲ್ಲಿ ಜನರು ಸೇರುತ್ತಾರೆ. ಯಡಿಯೂರಪ್ಪ ಸೇರಿ ಹಲವು ನಾಯಕರು ಬರ್ತಾರೆ. ಪ್ರಚಾರಕ್ಕೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್, ಯೋಗಿ ಆದಿತ್ಯನಾಥ್, ಗೋವಾ ಸಿಎಂ ಪ್ರಮೋದ್ ಸಾವಂತ್ ಸೇರಿ ಹಲವು ನಾಯಕರನ್ನು ಕರೆಸಲು ಪ್ರಯತ್ನಿಸುತ್ತಿದ್ದೇವೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಪ್ರಚಾರಕ್ಕೆ ಬರುತ್ತಾರೆ ಎಂದು ತಿಳಿಸಿದರು.