ದಾವಣಗೆರೆ:- ಮೂರು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ವಿಜಯ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.
ರಸ್ತೆಯಲ್ಲಿ ಪಟಾಕಿ ಹೊಡೆದು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಹೊನ್ನಾಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿನ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆದಿದೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸಿದ್ದಾರೆ.