ಬೆಂಗಳೂರು:– ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪಂಚ ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಗೆ ಹಾಗೂ PM ಮೋದಿಗೆ ಶುಭ ಕೋರಿದ್ದಾರೆ.
ಈ ಸಂಬಂಧ X ಮಾಡಿರುವ ಅವರು, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ನನ್ನ ಪಕ್ಷವು ಬಿಜೆಪಿಯ ಉನ್ನತ ನಾಯಕತ್ವವನ್ನು, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತದೆ ಎಂದಿದ್ದಾರೆ.
ಚುನಾವಣಾ ಫಲಿತಾಂಶಗಳ ಬಗ್ಗೆ ಮಾತನಾಡಿದ ದೇವೇಗೌಡ, ನರೇಂದ್ರ ಮೋದಿಯವರ ಅವರ ಅದ್ಭುತ ಪ್ರದರ್ಶನಕ್ಕೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ 2023 ರ ಫಲಿತಾಂಶ ಸಾಕ್ಷಿಯಾಗಿದೆ ಎಂದರು.