ತುಮಕೂರು:- ಪ್ರತಿಭಟನೆ ವೇಳೆ ಡಿವೈಎಸ್ಪಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನನ್ನು ಅರೆಸ್ಟ್ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತ ವೆಂಕಟೇಶ (42) ಬಂಧಿತ ಆರೋಪಿ.
ಪಾಕಿಸ್ತಾನ ಪರ ಘೋಷಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ವೇಳೆ ತುಮಕೂರು ನಗರ ಡಿವೈಎಸ್ ಪಿ.ಚಂದ್ರಶೇಖರ್ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾನ್ ಹ್ಯಾಂಡಲ್ ಮಾಡಿದ್ದ ಆರೋಪಿ ವಿರುದ್ಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ 353 ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ನೂಕಾಟ ತಳ್ಳಾಟವಾಗಿತ್ತು. ಈ ಸಂದರ್ಭದಲ್ಲಿ ಡಿವೈಎಸ್ಪಿ ಮೇಲೆ ಹಲ್ಲೆ ಆಗಿತ್ತು. ಜೊತೆಗೆ ಡಿವೈಎಸ್ ಪಿ ಮೂಗಿನ ಮೇಲೆ ರಕ್ತಸ್ರಾವ ಆಗಿತ್ತು. ಈ ಹಿನ್ನಲೆ ಇದೀಗ ಆರೋಪಿಯನ್ನ ಬಂಧಿಸಲಾಗಿದೆ.
ಇನ್ನು ವಿಧಾನಸೌಧದ ಆವರಣದಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ ಬೆನ್ನಲ್ಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದರು. ಅದರಂತೆ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಆಕ್ರೋಶ ಹೊರ ಹಾಕಿ, ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನಿಸಿದ್ದರು. ನಂತರ ಕೆಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲಾಗಿತ್ತು.