ಗದಗ:- ಮೀಸಲಾತಿ ರದ್ದು ಮಾಡ್ತೇವೆ ಅನ್ನೋ ರಾಹುಲ್ ಗಾಂಧಿ ಹೇಳಿಕೆ ವಿಚಾರ ಖಂಡಿಸಿ ಬಿಜೆಪಿ ಎಸ್ ಸಿ ಮೋರ್ಚಾದಿಂದ ಪ್ರತಿಭಟನೆ ಜರುಗಿದೆ.
ಸುಮ್ಮನೆ ಬಿಡಲ್ಲ, ಬಂದು ಗತಿ ಕಾಣಿಸುತ್ತೇವೆ: ಗೃಹ ಸಚಿವರು ಹೀಗೆ ಹೇಳಿದ್ಯಾರಿಗೆ!?
ಗದಗ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುಧ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಗದಗ ಹುಬ್ಬಳ್ಳಿ ರಸ್ತೆ ತಡೆದು ಮಾನವ ಸರಪಳಿ ನಿರ್ಮಿಸಿ ಕಿಡಿಕಾರಿದ್ದು, ಕೆಲಲಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ರಾಹುಲ್ ಸಂಸತ್ ಸದಸ್ಯತ್ವ ರದ್ದುಹೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಲಾಗಿದ್ದು, ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಬಿಜೆಪಿ ಯುವ ಮುಖಂಡ ಮುಖಂಡ ಉಮೇಶಗೌಡ ಪಾಟೀಲ ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದರು.