ಬೆಂಗಳೂರು:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆ ಆಗಿದ್ದು, ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಹಾಗೂ ಚಿಕ್ಕಬಳ್ಳಾಪುರದಿಂದ ಡಾ. ಕೆ ಸುಧಾಕರ್ ಕಣಕ್ಕೆ ಇಳಿದಿದ್ದಾರೆ.
ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಹೈಕಮಾಂಡ್ ಇದ್ದಂತೆ ಕಾಣುತ್ತಿದೆ. ರಘುಚಂದನ್ ಹಾಗೂ ಗೋವಿಂದ ಕಾರಜೋಳ ನಡುವೆ ಟಿಕೆಟ್ಗಾಗಿ ಫೈಟ್ ನಡೆಯುತ್ತಿದೆ. ಆದರೆ, ಕಾರಜೋಳ ಅವರಿಗೆ ಟಿಕೆಟ್ ನೀಡದಂತೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ, ರಾಜ್ಯ ನಾಯಕರೊಂದಿಗೆ ಮತ್ತೊಮ್ಮೆ ಚರ್ಚಿಸಿ ಟಿಕೆಟ್ ಘೋಷಿಸಲು ಹೈಕಮಾಂಡ್ ನಿರ್ಧರಿಸಿದೆ.