ಗದಗ:- ಬಿಜೆಪಿಗರು ಭಾವನೆಗಳ ಜೊತೆ ರಾಜಕಾರಣ ಮಾಡುತ್ತಾರೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ ಪ್ರಕರಣ: ಕೃತ್ಯ ಖಂಡಿಸಿ ಚಾಲಕರಿಂದ ಪ್ರತಿಭಟನೆ!
ಗದಗದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡುವ ಮೂಲಕ ಕೊಟ್ಟ ಮಾತನ್ನು ನಾವು ಉಳಿಸಿಕೊಂಡಿದ್ದೇವೆ. ಅನ್ನಭಾಗ್ಯದಲ್ಲಿ ದಾಸೋಹ, ಗೃಹಲಕ್ಷ್ಮೀ ಯೋಜನೆಯಲ್ಲಿ ಸಬಲೀಕರಣ, ಗೃಹಜ್ಯೋತಿ ಮೂಲಕ ಸಮಾಜಕ್ಕೆ ಬೆಳಕು, ಶಕ್ತಿ ಯೋಜನೆ ಮೂಲಕ ಮಹಿಳೆಗೆ ಸ್ವಾತಂತ್ರ್ಯ, ಯುವನಿಧಿ ಮೂಲಕ ಕಾಯಕವನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿಗರು ಭಾವನೆಗಳ ಜೊತೆ ರಾಜಕಾರಣ ಮಾಡಿದರೆ. ನಾವು ನಮ್ಮ ನಮ್ಮ ಗ್ಯಾರಂಟಿ ಮೂಲಕ ಬಡವರ ಬದುಕಿನಲ್ಲಿ ಬದಲಾವಣೆ ತಂದಿದ್ದೇವೆ. ಜಿ.ಎಸ್. ಪಾಟೀಲ್ ಅವರ ಕುಟುಂಬ ಸೇವಕರ ರೀತಿಯಲ್ಲಿ ಇಲ್ಲಿ ಕೆಲಸ ಮಾಡುತ್ತಿದೆ ಎಂದಿದ್ದಾರೆ.