ಬಾಗಲಕೋಟೆ:- ಬಿಎಸ್ವೈಗೆ ಆದ ಸ್ಥಿತಿ ವಿಜಯೇಂದ್ರನಿಗೂ ಬರಲಿದೆ ಎಂದು ಸಚಿವ ತಿಮ್ಮಾಪುರ ಭವಿಷ್ಯ ನುಡಿದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯಲ್ಲಿ ಸಾಕಷ್ಟು ನಾಯಕರಿಗೆ ಅನ್ಯಾಯಮಾಡಿದ್ದು, ನಮ್ಮ ಯಡಿಯೂರಪ್ಪ ಸಾಹೇಬರನ್ನು ಈ ಮುಂಚೆ ಯಾವ ರೀತಿಯಾಗಿ ಪಕ್ಷವು ನಡೆಸಿಕೊಂಡಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯ. ಅದೇ ರೀತಿ ಪರಿಸ್ಥಿತಿ ಅವರ ಮಗನಿಗೂ ಬರಲಿದೆ ಎಂದು ಭವಿಷ್ಯ ನುಡಿದರು.
ಲಿಂಗಾಯತರು, ದಲಿತರು ಎಲ್ಲ ಸರ್ವ ಜನಾಂಗದವರನ್ನು ತುಳಿಯುವ ವ್ಯವಸ್ಥೆ ಬಿಜೆಪಿಯಲ್ಲಿದೆ. ಯಾರನ್ನೂ ಸಹ ಅವರು ಸರಿಯಾಗಿ ನಡೆಸಿಕೊಳ್ಳುವುದಿಲ್ಲ. ಎಲ್ಲ ಮುಖಂಡರ ಪರಿಸ್ಥಿತಿಯೂ ಬಿಜೆಪಿಯಲ್ಲಿ ಹಾಗೆಯೇ ಇದೆ. ಇತ್ತೀಚೆಗೆ ವಿಧಾನಸಭೆ ಚುನಾವಣೆಯಲ್ಲಿ ವಿ.ಸೋಮಣ್ಣ ಅವರಿಗೆ ಬೇಕೆಂದಲೇ 2 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ, ಕ್ಷೇತ್ರ ಬದಲಿಸಿ ಅವರನ್ನು ಸೋಲಿಸಲಾಗಿದೆ. ಇಂಥ ಪಕ್ಷದಲ್ಲಿ ಇರುವುದು ಎಲ್ಲ ನಾಯಕರಿಗೂ ಬೇಡವಾಗಿದೆ ಎಂದರು.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ಹಿಂದು-ಮುಸ್ಲಿಂ ಗಲಾಟೆ ಮಾಡಿಸುವುದೇ ಬಿಜೆಪಿಯವರ ಮುಖ್ಯ ಕೆಲಸವಾಗಿದೆ. ತಮ್ಮ ಸ್ವಾರ್ಥ ಸಾಧನೆಗೆ ಬಿಜೆಪಿ ಹೈಕಮಾಂಡ್ ಮುಖಂಡರು ಎಲ್ಲರನ್ನೂ ಬಲಿಕೊಡುತ್ತಿದ್ದಾರೆ. ಅಧಿಕಾರದ ಲಾಲಸೆಗೆ ಏನು ಬೇಕಾದರೂ ಮಾಡಲು ಅವರು ಸಿದ್ಧರಾಗಿದ್ದಾರೆ ಎಂದು ಆರೋಪಿಸಿದರು.