ಗದಗ: ಜಸ್ಟಿಸ್ ಮೈಕೆಲ್ ಕುನ್ಹಾ ಅವರು ಕಡತಗಳನ್ನು ಪರಿಶೀಲಿಸಿ 7,223 ಕೋಟಿ ರೂ. ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ. ನೂರಾರು ಕೋಟಿ ರೂ. ವೆಚ್ಚಗಳ ಕುರಿತು ಲೆಕ್ಕಪತ್ರಗಳಿಲ್ಲ, ಕಾಗದಗಳೂ ಇಲ್ಲ. ಯಡಿಯೂರಪ್ಪ ಸಿಎಂ ಹಾಗೂ ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕೆಲ್ ಕುನ್ಹಾ ಅವರ ಆಯೋಗವು ಸಲ್ಲಿಸಿದ ಮಧ್ಯಂತರ ವರದಿಯಲ್ಲಿ ಯಡಿಯೂರಪ್ಪ ಅವರು ಸಿಎಂ ಹಾಗೂ ಶ್ರೀರಾಮುಲು ಅವರು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ 3 ಲಕ್ಷ ಪಿಪಿಇ ಕಿಟ್ಗಳನ್ನು 2,117 ರೂ. ನಂತೆ ಖರೀದಿಸಿ ಮಾರಾಟ ಮಾಡಿದ್ದಾರೆ.
BPL ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ.? ಇಲ್ಲಿದೆ ಮಾಹಿತಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜಸ್ಟಿಸ್ ಮೈಕೆಲ್ ಕುನ್ಹಾ ಅವರ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕೆ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿ. ಸಂವಿಧಾನ ಎತ್ತಿ ಹಿಡಿಯುವ, ನ್ಯಾಯಾಂಗದ ಬಗ್ಗೆ ಪ್ರಶ್ನಿಸಬಾರದು. ಜೋಶಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.