ಬೆಂಗಳೂರು:- ದೆಹಲಿಯ ಬಿಜೆಪಿ ಗೆಲುವು ಕರ್ನಾಟಕಕ್ಕೆ ಶಕ್ತಿ ತಂದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ್ದಕ್ಕೆ ತಪ್ಪು ಗ್ರಹಿಕೆ ಕಾರಣ ; ಸಚಿವ ಹೆಚ್.ಕೆ.ಪಾಟೀಲ್
ನಗರದಲ್ಲಿ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಕರ್ನಾಟಕ ಬಿಜೆಪಿಗೆ ಶಕ್ತಿ ತುಂಬಿದಂತಾಗಿದೆ. ದೆಹಲಿ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ, ತೆಲಂಗಾಣದ ಚುನಾವಣೆಗೆ ದಾರಿದೀಪವಾಗಲಿದೆ. ಇದು ದೇಶಕ್ಕೆ ಸಿಕ್ಕಿರುವ ಗೆಲುವು. ಡಿಕೆಶಿ ಗ್ಯಾರಂಟಿ ದೆಹಲಿಯಲ್ಲಿ ಠುಸ್ ಪಟಾಕಿ ಆಗಿದೆ ಎಂದು ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ 5 ಗ್ಯಾರಂಟಿ ಕೊಟ್ಟು ಅಭಿವೃದ್ಧಿ ಇಲ್ಲವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದೇ ಕೇಜ್ರಿವಾಲ್ 25 ಉಚಿತಗಳನ್ನು ನೀಡಿದ್ದರು. ಅವರ ಸ್ಥಿತಿ ಏನಾಗಿದೆ? ಎಂದು ಪ್ರಶ್ನಿಸಿದರು. ಇದು ದೇಶಕ್ಕೆ ದಿಕ್ಸೂಚಿ ಎಂದು ತಿಳಿಸಿದರು.