ಧಾರವಾಡ: ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ ಯಾತ್ರೆ ಅಸ್ಸಾಂ ರಾಜ್ಯದಲ್ಲಿ ಸಾಗುತ್ತಿರುವಾಗ ಆ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಧಾರವಾಡದ ಜ್ಯುಬಿಲಿ ವೃತ್ತವನ್ನು ಬಂದ್ ಮಾಡಿದ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದೇ ಕೇಂದ್ರ ಸರ್ಕಾರಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಬಿಜೆಪಿ ಸರ್ಕಾರ ಗೂಂಡಾಗಳನ್ನು ಬಿಟ್ಟು ಭಾರತ ಜೋಡೋ ನ್ಯಾಯ ಯಾತ್ರೆ ಮೇಲೆ ಈ ರೀತಿಯ ದಾಳಿ ಮಾಡಿಸುತ್ತಿದೆ.
ಪಿಂಕ್ ವಾಟ್ಸ್ಆ್ಯಪ್ ಇನ್ಸ್ಟಾಲ್ ಮಾಡಿದ್ದೀರಾ!? ಹುಷಾರ್, ಇದು ಅಪಾಯಕಾರಿ!
ಕೇಂದ್ರದಲ್ಲಿ ಬಿಜೆಪಿ ಗೂಂಡಾ ಸಾಮ್ರಾಜ್ಯ ನಡೆಸುತ್ತಿದೆ. ರಾಹುಲ್ ಗಾಂಧಿ ಅವರ ಜನಪ್ರಿಯತೆ ನೋಡಿ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಬಿಜೆಪಿ ಗೂಂಡಾಗಳೇ ಈ ರೀತಿ ಯಾತ್ರೆ ಮೇಲೆ ದಾಳಿ ಮಾಡಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.