ರಾಜ್ಯದಲ್ಲಿ ವೀಕೆಂಡ್ ಕರ್ಫೂ ಜಾರಿ ಹಿನ್ನೆಲೆ, ನಗರದ ಬಿಎಂಟಿಸಿ ಸಂಚಾರಕ್ಕೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಅಗತ್ಯ ಸೇವೆಗಳ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಮಾತ್ರ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದ್ದು, ಕಂಟೋನ್ಮೆಂಟ್ ಜೋನ್ ಹೊರತುಪಡಿಸಿ, ಶೇ 10 ರಷ್ಟು ಅಗತ್ಯ ಸಾರಿಗೆಗಳನ್ನು ಕಾರ್ಯಚರಣೆ ನಡೆಸಲಾಗುವುದು ಎಂದು ತಿಳಿಸಿದೆ. ಇನ್ನೂ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬಸ್ ಗಳ ಕಾರ್ಯಚರಣೆ ಇರುತ್ತದೆ ಎಂದು ಹೇಳಲಾಗಿದೆ. ಇನ್ನೂ ಆಸ್ಪತ್ರೆಗೆ ಹೋಗುವ ರೋಗಿಗಳು & ಸಹಾಯಕರಿಗೆ ಬಸ್ಸಿನಲ್ಲಿ ಪ್ರಯಾಣಿಸಲು ಅವಕಾಶವಿದ್ದು, ಜೊತೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಪ್ರಾಯಾಣಿಸಬಹುದು ಎಂದು ಮಾಹಿತಿ ನೀಡಿದೆ.
