Facebook Twitter Instagram YouTube
    ಕನ್ನಡ     English     తెలుగు
    Sunday, January 29
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ‘ಕರಿ ಹೈದ.. ಕರಿ ಅಜ್ಜ’ ಚಿತ್ರದಲ್ಲಿ ಬಾಲಿವುಡ್ ನಟ ಕಬೀರ್ ಬೇಡಿ ನಟನೆ

    ‘ಕರಿ ಹೈದ.. ಕರಿ ಅಜ್ಜ’ ಚಿತ್ರದಲ್ಲಿ ಬಾಲಿವುಡ್ ನಟ ಕಬೀರ್ ಬೇಡಿ ನಟನೆ

    AIN AdminBy AIN AdminDecember 6, 2022
    Share
    Facebook Twitter LinkedIn Pinterest Email

    ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ  ನಿರ್ಮಿಸುತ್ತಿರುವ,  ಸುಧೀರ್ ಅತ್ತಾವರ್ ನಿರ್ದೇಶನದ  “ಕರಿ ಹೈದ….ಕರಿ ಅಜ್ಜ …”.ಸಿನೆಮಾದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ.

    ಯುರೋಪಿನಾದ್ಯಂತ ಪ್ರಸಿದ್ದಿ ಪಡೆದ ” ಸಂದೀಕನ್” ಟಿವಿ ಸೀರಿಸ್ ನಲ್ಲಿ ನಟಿಸಿರುವ ಕಬೀರ್ ಬೇಡಿ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.  ಇದೀಗ “ಕರಿ ಹೈದ ಕರಿ ಅಜ್ಜ” ಚಿತ್ರದಲ್ಲಿ ನಟಿಸಿದ್ದು ಚಿತ್ರದಲ್ಲಿ ತಮ್ಮ ಪಾತ್ರದ ಕುರಿತು ಕಬೀರ್ ಬೇಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Demo

    ಸುಧೀರ್ ಅತ್ತಾವರ್ ನಿರ್ದೇಶಿಸಿರುವ “ಕರಿ ಹೈದ….ಕರಿ ಅಜ್ಜ …”.ಚಿತ್ರದಲ್ಲಿ ನಟಿಸಿದ್ದು ಖುಷಿಯಾಗಿದೆ. “ಕೊರಗಜ್ಜ” ದೈವದ ಕುರಿತಾದ ಈ ಚಿತ್ರದಲ್ಲಿ ರಾಜನ ಪಾತ್ರದಲ್ಲಿ ನಾನು ನಟಿಸಿದ್ದೇನೆ. ಶೃತಿ, ಭವ್ಯ, ಭರತ್ ಸೂರ್ಯ ಮುಂತಾದ ಕಲಾವಿದರ ಜೊತೆ ಅಭಿನಯಿಸಿದ್ದ ಅನುಭವವನ್ನು ಹಂಚಿಕೊಂಡ ಕಬೀರ್ ಬೇಡಿ, ಬೆಂಗಳೂರಿನ ನೃತ್ಯ ಗ್ರಾಮಕ್ಕೆ ಬರುತ್ತಿದ್ದುದ್ದನ್ನು ಹಾಗೂ ಗಿರೀಶ್ ಕಾರ್ನಾಡ್ ಅವರ ಜೊತೆಗಿನ ಒಡನಾಟವನ್ನು ಇದೇ ವೇಳೆ ನೆನಪು ಮಾಡಿಕೊಂಡರು.

    ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣವಾಗಿದೆ. ಬೆಳ್ತಂಗಡಿ ಆಸುಪಾಸಿನಲ್ಲೇ ಹೆಚ್ಚು ಚಿತ್ರೀಕರಣವಾಗಿದೆ. ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಅವರ ಕುಟುಂಬದವರಿಗೆ “ಕೊರಗಜ್ಜ”ನ ಕುರಿತಾದ ಚಿತ್ರ ಮಾಡುವ ಹಂಬಲವಿತ್ತು. ಈ ಕಥೆ ಮೆಚ್ಚಿ ಅವರು ನಿರ್ಮಾಕ್ಕೆ ಮುಂದಾದರು. .  ಕೊರಗಜ್ಜನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚೆ ಮಾಡಿ   12ನೇ ಶತಮಾನದಲ್ಲಿದ್ದ ಕೊರಗಜ್ಜನ ಬಗ್ಗೆ ಯಾರಿಗೂ ಗೊತ್ತಿರದ ನಿಜ ಬದುಕಿನ ವಿಷಯವನ್ನು ತಿಳಿಸುವ ಪ್ರಯತ್ನ ಈ ಚಿತ್ರದ ಮೂಲಕ ಮಾಡುತ್ತಿದ್ದೇವೆ. ಭರತ್ ಸೂರ್ಯ “ಕೊರಗಜ್ಜ” ನ ಪಾತ್ರದಲ್ಲಿ ಕಾಣಿಸಿಕೊಳುತ್ತಿದ್ದಾರೆ. ಕಬೀರ್ ಬೇಡಿ, ಶೃತಿ, ಭವ್ಯ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ  ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕಿದ್ದಾರೆ.  ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಛಾಯಾಗ್ರಹಣ, ಸುಧೀರ್- ಕೃಷ್ಣ ರವಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ ಎಂದು ಮಾಹಿತಿ ನೀಡಿದ ನಿರ್ದೇಶಕ ಸುಧೀರ್ ಅತ್ತಾವರ್, ಕಲಾ‌ ನಿರ್ದೇಶನವನ್ನು ತಾವೇ ಮಾಡಿರುವುದಾಗಿ ಹೇಳಿದರು.

     ನಮ್ಮ ಕುಟುಂಬದವರಿಗೆ “ಕೊರಗಜ್ಜ” ನ ಮೇಲೆ ವಿಶೇಷ ಭಕ್ತಿ. ಹಾಗಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ಚಿತ್ರತಂಡದ ಪ್ರೋತ್ಸಾಹದಿಂದ ಚಿತ್ರ ಉತ್ತಮವಾಗಿ ಮೂಡಿ ಬರುತ್ತಿದೆ. ಅಂದುಕೊಂಡಂತೆ ಆದರೆ, ಏಪ್ರಿಲ್ ಅಥವಾ ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ಮಾಪಕ ತ್ರಿವಿಕ್ರಮ ಸಪಲ್ಯ. ಕಬೀರ್ ಬೇಡಿ ಅವರಂತಹ ಮಹಾನ್ ನಟನ ಜೊತೆ ಅಭಿನಯಿಸಿದ್ದು ತುಂಬಾ ಸಂತೋಷವಾಗಿದೆ. ನಾನು ಈ ಚಿತ್ರದಲ್ಲಿ ರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸುಧೀರ್ ಅತ್ತಾವರ್ ಒಳ್ಳೆಯ ಚಿತ್ರ ನಿರ್ದೇಶಿಸುತ್ತಿದ್ದಾರೆ. ನಿಮ್ಮೆಲ್ಲರ ಬೆಂಬಲವಿರಲಿ ಎಂದರು ಹಿರಿಯ ನಟಿ ಭವ್ಯ.

    Share. Facebook Twitter LinkedIn Email WhatsApp

    Related Posts

    ದೈವಕ್ಕೆ ಕೋಲ ನೀಡಿದ ಸ್ಯಾಂಡಲ್ ವುಡ್ ನಟಿ ಸಂಗೀತಾ ಶೃಂಗೇರಿ

    January 29, 2023

    ಮಂಗಳೂರಿಗೆ ಬಂದ ಸೂಪರ್ ಸ್ಟಾರ್ ರಜನಿಕಾಂತ್: ತುಳು ನಾಡಿನಲ್ಲಿ ‘ಜೈಲರ್’ ಚಿತ್ರದ ಶೂಟಿಂಗ್

    January 29, 2023

    ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ’ ನೀಡುವ ಭರವಸೆ ನೀಡಿದ ಸಿಎಂ ಬೊಮ್ಮಾಯಿ

    January 29, 2023

    ಆಸ್ಪತ್ರೆಗೆ ದಾಖಲಾಗಿರುವ ತಾರಖ್ ರತ್ನ ಆರೋಗ್ಯ ವಿಚಾರಸಿಲು ಆಸ್ಪತ್ರೆಗೆ ಭೇಟಿ ನೀಡಿದ ಶಿವಣ್ಣ

    January 29, 2023

    ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಗೊಳಿಸಿದ ಬೊಮ್ಮಾಯಿ

    January 29, 2023

    ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ

    January 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.