ಈ ಕುರಿತಾಗಿ ಅಂಕಿತಾ ಅತ್ತೆಗೆ ಧೈರ್ಯ ತುಂಬಿರುವ ಕಂಗನಾ, ಯಾವುದೇ ಕಾರಣಕ್ಕೂ ಇಬ್ಬರನ್ನೂ ದೂರವಾಗುವುದಕ್ಕೆ ಬಿಡೋದಿಲ್ಲ. ಬಿಗ್ ಬಾಸ್ ಅದೊಂದು ಗೇಮ್ ಅಷ್ಟೇ. ಮನೆ ಮುರಿಯುವಂತಹ ಕೆಲಸವನ್ನು ಯಾರೂ ಮಾಡಬಾರದು ಎಂದು ಕಂಗನಾ ಹೇಳಿದ್ದಾರೆ. ಈ ಬಾರಿ ಬಿಗ್ ಬಾಸ್ ಟ್ರೋಫಿ ಅಂಕಿತಾಗೆ ಬರಬೇಕು ಎಂದು ಹಾರೈಸಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮತ್ತೆ ಸುದ್ದಿ ಆಗುತ್ತಿದ್ದಾರೆ ಅಂಕಿತಾ ಲೋಖಂಡೆ (Ankita Lokhande) ಹಾಗೂ ವಿಕ್ಕಿ ದಂಪತಿ. ತನ್ನ ಪತಿ ಬಿಗ್ ಬಾಸ್ ಸ್ಪರ್ಧಿ ಮನ್ನಾರಾ ಚೋಪ್ರಾ ಜೊತೆ ಕ್ಲೋಸ್ ಆಗುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಪತಿ ವಿಕ್ಕಿ ಮೇಲೆ ಕೋಪಗೊಂಡಿದ್ದಾರೆ. ಆತನನ್ನು ಮದುವೆ ಆಗಿದ್ದಕ್ಕೆ ಕಣ್ಣೀರು ಇಟ್ಟಿದ್ದಾರೆ. ಜೊತೆಗೆ ವಿಷಾದವನ್ನೂ ವ್ಯಕ್ತ ಪಡಿಸಿದ್ದಾರೆ. ಆಕೆ ನಿನ್ನ ಜೀವನದಲ್ಲಿ ಬಂದಳು. ನೀನು ಇಷ್ಟ ಪಡ್ತಿದ್ದೀಯಾ ಎಂದು ಮಾತನಾಡಿದ್ದಾರೆ.
ಬಿಗ್ ಬಾಸ್ (Bigg Boss) ಮನೆಯಲ್ಲಿ ವಿಕ್ಕಿ ಮತ್ತು ಅಂಕಿತಾ ನಡೆಯನ್ನೇ ಅರ್ಥ ಮಾಡಿಕೊಳ್ಳಲು ಆಗುತ್ತಿದೆ. ಮೊನ್ನೆಯಷ್ಟೇ ಒಂದೇ ಬ್ಲ್ಯಾಂಕೆಟ್ ಹೊದ್ದುಕೊಂಡು ಈ ಜೋಡಿ ಮಲಗಿತ್ತು. ಅದು ರಾತ್ರಿ ವೇಳೆ ಸುಮ್ಮನೆ ಮಲಗಿಲ್ಲ, ಬ್ಲ್ಯಾಂಕೆಟ್ ಒಳಗೆ ಚಲಿಸಿದ್ದರು. ಬ್ಲ್ಯಾಂಕೆಟ್ ಅಸ್ತವ್ಯಸ್ತಗೊಂಡಿತ್ತು. ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿತ್ತು.