ಬಳ್ಳಾರಿ: ಬೊಲೋರೋ ವಾಹನ ಪಲ್ಟಿಯಾಗಿ 25 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಬಳ್ಳಾರಿಯ ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಐವರ ಮಹಿಳೆಯರ ಸ್ಥಿತಿ ಗಂಭೀರವಾಗಿದ್ದು,
ಮಹಿಳಾ ಕಾರ್ಮಿಕರನ್ನು ಕೂಲಿ ಕೆಸಲಕ್ಕೆ ಕರೆದುಕೊಂಡು ಹೊಗುತ್ತಿದ್ದ ವೇಳೆ ಬೊಲೊರೋ ವಾಹನ ಪಲ್ಟಿಯಾಗಿದೆ. ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.