ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ.
ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 7 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಬೆದರಿಕೆ ಕರೆ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಯಿಂದ ಕಳುಹಿಸುತ್ತಿರುವ ಪೊಲೀಸರು, ಪೋಷಕರೆಲ್ಲರೂ ಆತಂಕಪಡುವ ಸ್ಥಿತಿ ಏನೂ ಆಗಿಲ್ಲವೆಂದು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರ ಹಾಗು ಬಾಂಬ್ ನಿಷ್ಕ್ರೀಯತಂಡ ದೌಡಾಯಿಸಿದ್ದು ಪರಿಶೀಲನೆ ನಡೆಸಲು ಮುಂದಾಗಿದೆ.
ಕಳೆದ 1 ವರ್ಷದಿಂದ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೂ ಸಹ ಈವರೆಗೂ ಬಾಂಬ್ ಬೆದರಿಕೆ ಹಾಕಿರುವ ಆರೋಪಿಯ ಬಂಧನವಾಗಿಲ್ಲ. ಕಳೆದ ವರ್ಷ ಒಂದೇ ದಿನ 30 ಶಾಲೆಗಳಿಗೆ ಇ-ಮೇಲ್ ಬೆದರಿಕೆ ಹಾಕಲಾಗಿತ್ತು.