ಬೆಂಗಳೂರು:- ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಪ್ರಕರಣಗಳು ದಾಖಲಾಗಿದೆ.
Shobha Karandlaje: ನನ್ನ ವಿರುದ್ಧ ದಾಖಲೆ ಬಹಿರಂಗಕ್ಕೆ ಪೊನ್ನಣ್ಣನಿಗೆ ನೇಮಕ ಮಾಡಲಿದೆ: ಶೋಭಾ ಕರಂದ್ಲಾಜೆ
ಆರೋಪಿಗಳ ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ 10 ಕೇಸ್ ದಾಖಲಾಗಿವೆ. ಕಳೆದ ಒಂದು ವಾರದಲ್ಲಿ 10 ಬಾರಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಕಿಡಿಗೇಡಿಗಳು ಅಕ್ಟೋಬರ್ 22 ರಿಂದ 26ರವರೆಗೆ ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದರು.
ಕಿಡಿಗೇಡಿಗಳು ವೆಬ್ಸೈಟ್ ಮತ್ತು ಎಕ್ಸ್ ಖಾತೆ ಮುಖಾಂತರ ವಿಮಾನ ನಿಲ್ದಾಣ ಮತ್ತು ಇಂಡಿಗೋ ಏರ್ಲೈನ್ಸ್ ಸೇರಿದಂತೆ ಹಲವು ಏರ್ಲೈನ್ಸ್ಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ. ದೇವನಹಳ್ಳಿ ಎಸಿಪಿ ನವೀನ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.
*ಬೆಂಗಳೂರು ಟು ಅಯೋಧ್ಯೆ ವಿಮಾನಕ್ಕೆ ಬಾಂಬ್ ಬೆದರಿಕೆ
*ಮುಂಬೈ ಬೆಂಗಳೂರು ವಿಮಾನಕ್ಕೆ ಬಾಂಬ್ ಬೆದರಿಕೆ
*6 ವಿಮಾನಗಳಿಗೆ ಬಾಂಬ್ ಬೆದರಿಕೆ