ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ನಗರದ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಾಲೇಜುಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬಿಎಮ್ಎಸ್, ರಾಮಯ್ಯ, ಬಿಐಟಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಂಎಸ್ ಕಾಲೇಜು, ವಿ.ವಿ.ಪುರಂನಲ್ಲಿರುವ ಬಿಐಟಿ ಕಾಲೇಜು ಸೇರಿದಂತೆ ಕೆಲವು ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕಿಯ ಸಿಬ್ಬಂದಿ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಮುಂಜಾಗೃತ ಕ್ರಮವಾಗಿ ಪೊಲೀಸರು ಮೂರು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಹೊರಕ್ಕೆ ಕಳುಹಿಸಿದ್ದಾರೆ. ಸದ್ಯ ಪರಿಶೀಲನೆ ಮುಂದುವರೆದಿದೆ.