ಅಯೋಧ್ಯೆ:- ಬೆಂಗಳೂರಿಂದ ಹೊರಟ ವಿಮಾನಕ್ಕೆ ಬಾಂಬ್ ಬೆದರಿಕೆ ಹಿನ್ನೆಲೆ, ಅಯೋಧ್ಯೆ ಏರ್ಪೋರ್ಟ್ ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ವಿಮಾನದಲ್ಲಿ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್ ಎಂದು ಅಯೋಧ್ಯೆ ಏರ್ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಟು ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್ಲೈನ್ಸ್ಗೆ ಹುಸಿಬಾಂಬ್ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.
ಅಯೋಧ್ಯೆ ಏರ್ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರು ಟು ಅಯೋಧ್ಯೆ ನಡುವೆ ಸಂಚರಿಸುವ ಆಕಾಶ ಏರ್ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಮಧ್ಯಾಹ್ನ 1:30ರ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಮಾಹಿತಿ ಬಂದ ತಕ್ಷಣ ಎಮರ್ಜೆನ್ಸಿ ಲ್ಯಾಂಡಿಂಗ್ಗೆ ಆದೇಶಿಸಲಾಯಿತು ಎಂದಿದ್ದಾರೆ.