ಉಡುಪಿ: ಕರ್ನಾಟಕದಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ನಗರದ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ರವಾನಿಸಲಾಗಿದೆ. ಹೌದು ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ಶಾಲಾ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಶ್ವಾನ ದಳ ಹುಡುಕಾಟ ನಡೆಸಿದೆ. ಬೆದರಿಕೆ ಸಂದೇಶದಿಂದಾಗಿ ಪೋಷಕರು ಆತಂಕಗೊಂಡಿದ್ದಾರೆ. ಶಾಲೆಯಲ್ಲಿ ರಾಜ್ಯ ಮತ್ತು ಅಂತರರಾಜ್ಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
Periods: ಮಹಿಳೆಯರೇ ಗಮನಿಸಿ.. ಮುಟ್ಟಿನ ಸಮಯದಲ್ಲಿ ಮೊಸರು ತಿನ್ನಬಹುದೇ..? ಇಲ್ಲಿದೆ ಮಾಹಿತಿ
ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಶಾಲೆಯ ಮೂಲೆ ಮೂಲೆಯಲ್ಲೂ ಹುಡುಕಾಟ ನಡೆಸಿದ್ದಾರೆ.