ಬೆಂಗಳೂರು:– ಕಾಂಗ್ರೆಸ್ ಬಾಂಬ್ ಇಡುವವರಿಗೆ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ’ ಎಂದು ಹೇಳಿದರು.
ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು. ಈ ಕುರಿತು ವಿವಾದ ಭುಗಿಲೇಳುತ್ತಿದ್ದಂತೆ ಸ್ಪಷ್ಟನೆ ನೀಡಿದ್ದ ಸಚಿವ ಜಮೀರ್, ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ನಾನು ಮಾತನಾಡಿದ್ದೇನೆ. ನಾನು ಹೈದರಾಬಾದ್ ನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದವರ ಬಗ್ಗೆ ಅಗೌರವದಿಂದ ಮಾತನಾಡಿಲ್ಲ.
ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ ಎಂಬುದನ್ನೇ ಅಲ್ಲಿ ಪ್ರಸ್ತಾಪಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು