ಆಗ್ರಾ: ಜಗದ್ವಿಖ್ಯಾತ ತಾಜ್ ಮಹಲ್ ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಆಗ್ರಾ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಇಮೇಲ್ ಸ್ವೀಕರಿಸಿದ ಕೂಡಲೇ ಆಗ್ರಾದಲ್ಲಿರುವ ತಾಜ್ ಮಹಲ್ ಸ್ಮಾರಕದ ಮೂಲೆ ಮೂಲೆಗಳಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ.
ತಮಿಳುನಾಡಿಗೆ ಫೆಂಗಲ್ ಹೊಡೆತ; ಪರಿಸ್ಥಿತಿ ನಿರ್ವಹಣೆಗೆ ನೆರವಿನ ಭರವಸೆ ನೀಡಿದ ಕೇಂದ್ರ
ಉತ್ತರ ಪ್ರದೇಶದ ಪ್ರವಾಸೋದ್ಯಮ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನಂತರ ಅದು ಹುಸಿ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಈ ಬಗ್ಗೆ ತಾಜ್ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆ ಬಾಂಬ್ ನಿಷ್ಕ್ರಿಯ ದಳ ಮತ್ತು ಸ್ಥಳೀಯ ಪೊಲೀಸರು ಮೊಘಲ್ ಸ್ಮಾರಕ ತಾಜ್ ಮಹಲ್ ಗೆ ದೌಡಾಯಿಸಿ ಸಂಪೂರ್ಣ ಶೋಧ ಕಾರ್ಯ ನಡೆಸಿದ್ದರು. ಆದರೆ ಅಲ್ಲಿ ಅನುಮಾನಾಸ್ಪದವಾಗಿ ಯಾವುದೇ ವಸ್ತು ಪತ್ತೆಯಾಗಿಲ್ಲ ಎಂದು ಸಹ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.