ಪ್ಯಾರಿಸ್ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಘಟನೆ ಜರುಗಿದೆ.
ಬೀಚ್ನಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಬಡಿದ ಸಿಡಿಲು.. ಮೂವರ ಸ್ಥಿತಿ ಚಿಂತಾಜನಕ!
ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಭಾನುವಾರ ಬೆಳಗ್ಗೆ 10.19ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿದೆ. ಪ್ಯಾರಿಸ್ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್ನೆಸ್ ಬ್ಯಾಗ್ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು.
ಬೆದರಿಕೆ ಬಂದ ನಂತರ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.08 ಕ್ಕೆ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ವಿಮಾನವು ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.19 ಕ್ಕೆ ಇಳಿಯಿತು. ಪ್ಯಾರಿಸ್-ಮುಂಬೈ ವಿಮಾನದಲ್ಲಿ 12 ಸಿಬ್ಬಂದಿ ಹಾಗೂ 294 ಪ್ರಯಾಣಿಕರಿದ್ದರು ಎನ್ನಲಾಗಿದೆ.
ಪ್ರೋಟೋಕಾಲ್ ಅನ್ನು ಅನುಸರಿಸಿ, ವಿಮಾನಯಾನ ಸಂಸ್ಥೆಯು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದೆ.