ಧಾರವಾಡ: ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎನ್ನುವುದರ ಜೊತೆಗೆ ಬಾಂಬ್ ಬೆದರಿಕೆ ಹಾಕಿ, ಬೆಂಗಳೂರಿನ ವಿವಿಧ ಶಾಲೆಗಳಿಗೆ ಈ-ಮೇಲ್ ಬಂದಿರುವುದಿರುವುದು ಬಹು ದೊಡ್ಡ ಆತಂಕದ ಸಂಗತಿಯಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು. ಧಾರವಾಡದಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈಗಿನ ಮಾಹಿತಿ ಪ್ರಕಾರ ಬೆಂಗಳೂರಿನ 17 ಶಾಲೆಗಳಿಗೆ ಈ-ಮೇಲ್ ಮೂಲಕಬಸಂಬ್ ಬೆದರಿಕೆ ಹಾಕಲಾಗಿದೆ. ಇಸ್ಲಾಂಗೆ ಮತಾಂತರವಾಗಿ ಇಲ್ಲವೇ, ಸಾಯಲು ಸಿದ್ಧವಾಗಿ ಎಂಬ ಸಂದೇಶ ಕಳುಹಿಸಲಾಗಿದೆ.
ಇಡಿ ಹಿಂದೂಗಳಿಗೆ ಇವರು ಈ ರೀತಿಯ ಆಹ್ವಾನ ನೀಡಿದ್ದಾರೆ. ಈ ದೇಶವನ್ನು ಇಸ್ಲಾಂ ಮಾಡುತ್ತೇವೆ, ಖಡ್ಗದ ಆಧಾರದ ಮೇಲೆ ಮತಾಂತರ ಮಾಡುತ್ತೇವೆ ಎಂದಿದ್ದಾರೆ. ಮುಜಾಹಿದ್ದೀನ್ ಎಂಬ ಹಿಂದೂ ವಿರೋಧಿಯಿಂದ ಈ ರೀತಿಯ ಮೇಲ್ ಬಂದಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ. ಕಾಂಗ್ರೆಸ್ನ ತುಷ್ಟಿಕರಣ ಪರಿಣಾಮದಿಂದ ಮುಸ್ಲಿಂರು ನಮ್ಮದೇ ರಾಜ್ಯ ಎನ್ನುವ ಭ್ರಮೆಯಲ್ಲಿದ್ದಾರೆ. ಶಾಲಾ, ಕಾಲೇಜುಗಳಿಗೆ ಬೆದರಿಕೆ ಬರುತ್ತಿರುವುದು ಗಂಭೀರ ವಿಚಾರ. ಜನರು ತಮ್ಮ ಸುರಕ್ಷತೆ ಬಗ್ಗೆ ವಿಚಾರ ಮಾಡಬೇಕು.
ಈ ಮೇಲ್ ಎಲ್ಲಿಂದ ಯಾರಿಗೆ ಬಂದಿದೆ ಎಂಬುದನ್ನು ಪತ್ತೆ ಮಾಡಬೇಕು. ಇದೊಂದು ಭಯೋತ್ಪಾದನೆಗೆ ಸಂಬಂಧಪಟ್ಟಿದ್ದು. ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಘಟನೆಗಳು ಆಗುವ ಬಗ್ಗೆ ಮೇಲ್ನಲ್ಲಿ ಸೂಚನೆ ಇದೆ. ಸರ್ಕಾರ ಇಂತವರನ್ನು ಹದ್ದು ಬಸ್ತಿನಲ್ಲಿ ಇಡಬೇಕು. ಇವರನ್ನು ಒದ್ದು ಒಳಗೆ ಹಾಕಬೇಕು. ಮೂರ್ತಿ ಉಪಾಸಕರನ್ನು ಕೊಲ್ಲಬೇಕು ಎಂದು ಕುರಾನ್ನಲ್ಲಿ ಬರೆಯಲಾಗಿದೆ. ಇದಕ್ಕೆ ಪುಷ್ಠಿಯಾಗಿ ಈ ಮೇಲ್ ಬಂದಿದೆ. ಇದನ್ನು ನಾನು ವಿರೋಧಿಸುತ್ತೇನೆ ಜೊತೆಗೆ ಖಡಿಸುತ್ತೇನೆ ಎಂದು ಕಿಡಿಕಾರಿದರು.