ಗದಗ:- 2024 ರ ಲೋಕಸಭಾ ಚುನಾವಣೆ ಪ್ರಯುಕ್ತ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.
ಅದರಂತೆ ರೋಣ ವಿಧಾನಸಭಾ ಮತಕ್ಷೇತ್ರದಲ್ಲಿ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಚಾರ ಕೈಗೊಂಡಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕು, ಗಜೇಂದ್ರಗಡ ತಾಲೂಕಿನ ಹಲವು ಗ್ರಾಮಗಳಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದು, ಕುಂಟೋಜಿ, ನಿಡಗುಂದಿ ಹಾಳಕೇರಿ, ಮಾರನಬಸರಿ ಗ್ರಾಮಗಳಲ್ಲಿ ಅಬ್ಬರದ ಪ್ರಚಾರ ನಡೆಸಿ ಗಮನ ಸೆಳೆದಿದ್ದಾರೆ.
ಅಬ್ಬಿಗೇರಿ, ಕೊಟುಮಚಗಿ, ತಿಮ್ಮಾಪುರ, ಹರ್ಲಾಪುರ, ಕಣಗಿನಹಾಳದಲ್ಲಿ ಮತಬೇಟೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿ ಮಾಜಿ ಸಿಎಂ ಬೊಮ್ಮಾಯಿ ಮತಕೇಳಿದ್ದಾರೆ. ನಿಮ್ಮ ಮತಗಳ ಮೂಲಕ ನರೇಂದ್ರ ಮೋದಿಗೆ ಕೃತಜ್ಞತೆ ಸಲ್ಲಿಸಿ ಅಂತ ಮನವಿ ಮಾಡಿದ್ದಾರೆ.
ಕೋವಿಡ್ ಟೈಮಲ್ಲಿ ದೇಶದ ಜನರ ಜೀವ ರಕ್ಷಣೆ ಮಾಡಿದ ಮೋದಿಗೆ ಕೃತಜ್ಞತೆ ಸಲ್ಲಿಸಿ ಅಂತ ಮನವಿ ಮಾಡಿದ್ದು, ಮಾಜಿ ಶಾಸಕ ಕಳಕಪ್ಪ ಬಂಡಿ ಸೇರಿದಂತೆ ಹಲವು ಕಾರ್ಯಕರ್ತರು ಸಾತ್ ಕೊಟ್ಟಿದ್ದಾರೆ.