ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಇಂದು ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನಡೆಯಿತು, ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು, ಇದೇ ರಥೋತ್ಸದ ವೇಳೆ ಕೂದಲೆಳೆಯ ಅಂತರದಲ್ಲಿ ಅನಾಹುತ ತಪ್ಪಿ ಭಕ್ತರ ಆತಂಕವನ್ನ ದೂರ ಮಾಡಿತು. ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಮಣ್ಯ ಕ್ಷೇತ್ರ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ನಾಗರಾಧನೆಯ ಕ್ಷೇತ್ರ, ಇಂದು ಮಧ್ಯಾಹ್ನ 12-15 ರಿಂದ 12-30 ಕ್ಕೆ ಸಲ್ಲುವ ಶುಭ ಮೇಷ ಲಗ್ನದಲ್ಲಿ ಶ್ರೀಸುಬ್ರಮಣ್ಯ ಸ್ವಾಮಿಯ ಬ್ರಹ್ಮರಥೋತ್ಸ ನೆರವೇರಿತು,
ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿಯವರು ರಥೋತ್ಸವಕ್ಕೆ ಚಾಲನೆ ನೀಡಿದರು, ಸುಬ್ರಮಣ್ಯಸ್ವಾಮಿಯ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದು, ರಥಕ್ಕೆ ಹೂವು,ದವನ ಮತ್ತು ಬಾಳೆಹಣ್ಣು ಎಸೆಯುವ ಮೂಲಕ ದೇವರ ಕೃಪೆಗೆ ಪಾತ್ರರಾದರು. ರಥೋತ್ಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಮತ್ತು ದೊಡ್ಡಬಳ್ಳಾಪುರದ ಶಾಸಕರಾದ ಧೀರಜ್ ಮುನಿರಾಜು ಸೇರಿದಂತೆ ಗಣ್ಯರು ಭಾಗವಹಿಸುವರು.
Bihula Bai: ಕಸ ಸಂಗ್ರಹಿಸಿ 20ರೂ. ದೇಣಿಗೆ ನೀಡಿದ ಅಜ್ಜಿಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ!
ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಘಾಟಿ ದೇವಸ್ಥಾನಕ್ಕೆ ಉತ್ತಮ ಆದಾಯ ಬರುತ್ತಿದೆ, ಇಂತಹ ಕ್ಷೇತ್ರವನ್ನ ಅಭಿವೃದ್ಧಿ ಪಡಿಸಿ ಮೂಲಭೂತ ಸೌಕರ್ಯಗಳನ್ನ ಒದಗಿಸಬೇಕು, ಈ ಕಾರಣಕ್ಕಾಗಿಯೇ ಮುಜರಾಯಿ ಸಚಿವರನ್ನ ರಥೋತ್ಸವಕ್ಕೆ ಅಹ್ವಾನಿಸಲಾಗಿತು, ಈ ಸಮಯದಲ್ಲಿ ಸಚಿವರೊಂದಿಗೆ ದೇವಸ್ಥಾನದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲಾಗಿತ್ತು, ಅವರು ಸಹ ಸ್ಪಂದಿಸಿದ್ದಾರೆ, ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಮತ್ತೊಂದು ಸಭೆಯನ್ನ ಘಾಟಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.