ಗದಗ:- ಬ್ರೇಕ್ ಫೇಲಾಗಿ ಆಟೋ ಹಾಗೂ ಸ್ಕೂಟಿಗೆ KSRTC ಬಸ್ ಡಿಕ್ಕಿ ಹೊಡೆದ ಘಟನೆ ಗದಗ ನಗರದ ಹಳೇ ಬಸ್ ನಿಲ್ದಾಣದ ಬಳಿ ಜರುಗಿದೆ.
ಚಾಲಕನ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಬಸ್ ನ ಬ್ರೆಕ್ ಫೇಲಾದ ಹಿನ್ನೆಲೆ ರಸ್ತೆಯಲ್ಲಿನ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಗದಗ ನಗರದ ಬಸ್ ನಿಲ್ದಾಣದಿಂದ ಹಾತಲಗೇರಿ ಗ್ರಾಮಕ್ಕೆ ಹೊರಟಿದ್ದ ಬಸ್ ಎನ್ನಲಾಗಿದೆ. ಆಟೋದಲ್ಲಿದ್ದ ಓರ್ವ ಯುವಕ ಹಾಗೂ ವಿದ್ಯಾರ್ಥಿನಿಗೆ ಗಾಯವಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಸ್ಥಳಿಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬಸ್ ನಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗದಗ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)