ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಂದನವನ ಲೇಔಟ್ನ ನಿವಾಸದಲ್ಲಿ ಆರ್.ಅಶೋಕ್ ಅವರು ಹುತಾತ್ಮ ಯೋಧ ಪ್ರಾಂಜಲ್ ಅಂತಿಮ ದರ್ಶನ ಪಡೆದರು.
ವೀರ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಕರ್ನಾಟಕದ ಹೆಮ್ಮೆ ಎಂದು ಅಂತಿಮ ದರ್ಶನ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ದೇಶಕ್ಕಾಗಿ ಧೈರ್ಯ, ಶೌರ್ಯದಿಂದ ಎಂ.ವಿ.ಪ್ರಾಂಜಲ್ ಹೋರಾಡಿದ್ದಾರೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪುಣ್ಯ ಪುತ್ರ. ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಂತಿಮ ದರ್ಶನ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ವೀರ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್ನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು, ಮಕ್ಕಳು ಸೇರಿ ನೂರಾರು ಜನರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.