ಭೋಪಾಲ್:- ಮಧ್ಯಪ್ರದೇಶ ಭೋಪಾಲ್ನಲ್ಲಿರುವ ಸರ್ಕಾರಿ ಶೂಟಿಂಗ್ ಅಕಾಡೆಮಿಯಲ್ಲಿ ಗುಂಡು ಹಾರಿಸಿಕೊಂಡು 17ರ ಅಪ್ರಾಪ್ತ ಬಾಲಕ ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ.
RCB ಮುಂದಿನ ಕ್ಯಾಪ್ಟನ್ ಯಾರು ಗೊತ್ತಾ!? ಹೆಸರು ಫೈನಲ್, ಫ್ಯಾನ್ಸ್ ಖುಷ್!
17 ವರ್ಷದ ಯಥಾರ್ಥ್ ರಘುವಂಶಿ ಮೃತ ಬಾಲಕ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿರುವ ಶೂಟಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದು, ಅಕಾಡೆಮಿಯ ಹಾಸ್ಟೆಲ್ನಲ್ಲಿ ವಾಸವಾಗಿದ್ದ. ಭಾನುವಾರ ಸಂಜೆ ಅಕಾಡೆಮಿಯಲ್ಲಿ ಪ್ರಾಯೋಗಿಕ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಹೀಗಾಗಿ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.