ನೆಲಮಂಗಲ:- ಬೆಂಗಳೂರಿನ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆಯ ಬಳಿ ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.
ಟಿಪ್ಪರ್ ಲಾರಿ ಮತ್ತು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರನ ಮೇಲೆ ಟಿಪ್ಪರ್ ಲಾರಿ ಹರಿದು ಹೋಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಚಾಲಕನ ಗುರುತು ಪತ್ತೆಯಾಗಿಲ್ಲ.
ನೆಲಮಂಗಲ ಮೂಲಕ ತುಮಕೂರು ಕಡೆ ಸಾಗುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕನ ಅತೀ ವೇಗ ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.