ಬೆಂಗಳೂರು:- ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅ.3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಅಷ್ಟೇ ಅಲ್ಲ, ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಎಚ್ಚರಿಸಿದ್ದಾರೆ.
ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ.
ಯಾರದೊ ಹೆಸರಿನಲ್ಲಿ ಬೇರೆ ಯಾರೋ ಪರೀಕ್ಷೆ ಬರೆಯುವುದನ್ನು ತಡೆಯಲು ಈ ಬಾರಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ವೇಳೆ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜೊತೆಗೆ ಆನ್ಲೈನ್ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ.