ನವದೆಹಲಿ:- ಉಸಿರಾಟದ ತೊಂದರೆ ಹಿನ್ನೆಲೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ: ಕಾಂಗ್ರೆಸ್ ನಾಯಕರ ವಿರುದ್ಧ HDK ಕಿಡಿ!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಇಂದು ಸಂಜೆ ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
92 ವರ್ಷದ ಡಾ. ಮನಮೋಹನ್ ಸಿಂಗ್ ಅವರನ್ನು ಇಂದು ಸಂಜೆ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಾಗಿಸಲಾಗಿದೆ.
ಮನಮೋಹನ್ ಸಿಂಗ್ ಅವರು 1991- 96ರ ಅವಧಿಯಲ್ಲಿ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು. ದೇಶದ ಆರ್ಥಿಕತೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ತಂದಿದ್ದರು.ಕಾಂಗ್ರೆಸ್ ನೇತೃತ್ವದಲ್ಲಿ 2004 ರಿಂದ 2014 ರವರೆಗಿನ ಯುಪಿಎ ಸರ್ಕಾರದ ಎರಡು ಅವಧಿಯಲ್ಲಿ ಪ್ರಧಾನಿಯಾಗಿದ್ದರು. ಬಳಿಕ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಈ ವರ್ಷದ ಏಪ್ರಿಲ್ನಲ್ಲಿ ನಿವೃತ್ತರಾಗಿದ್ದರು.