ಬೆಂಗಳೂರು: ರೆಬಲ್ಸ್ ನಾಯಕರ ತಂಡ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಕ್ಫ್ ವಿರುದ್ಧ ಪ್ರತ್ಯೇಕ ಹೋರಾಟ ಆರಂಭಿಸಿದೆ.ಇದೀಗ ಯತ್ನಾಳ್ ಪ್ರತ್ಯೇಕ ಹೋರಾಟವನ್ನು ಕೈಬಿಡುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ ಬಿಟ್ಟು ನಮ್ಮ ಜೊತೆ ಕೈಜೋಡಿಸಿ ಎಂದು ವಿಜಯೇಂದ್ರ ವಿನಂತಿ ಮಾಡಿಕೊಂಡರು.
ಆದರೆ, ಅವರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ. ಈಗಲಾದರೂ ಜಾಗೃತರಾಗಿ, ಅವರೆಲ್ಲರೂ ಸೇರಿ ಪಕ್ಷವನ್ನು ಬಲಪಡಿಸಲು ಸಹಕಾರ ಕೊಡಬೇಕೆಂದು ನಾನು ವಿನಂತಿ ಮಾಡುತ್ತೇನೆ.
Chanakya Niti: ಮಹಿಳೆಯರ ಈ ಅಭ್ಯಾಸಗಳೇ ಇಡೀ ಕುಟುಂಬದ ನಾಶಕ್ಕೆ ಕಾರಣವಂತೆ..!
ನಾವು ಮನವಿ ಮಾಡುತ್ತೇವೆ. ಆದರೆ ಉಳಿದದ್ದು ಅವರಿಗೆ, ಕೇಂದ್ರ ನಾಯಕರಿಗೆ ಬಿಟ್ಟಿದ್ದು. ಇದೆಲ್ಲ ಹೈಕಮಾಂಡ್ ಗಮನಕ್ಕೂ ಬಂದಿದೆ. ಏನು ಮಾಡುತ್ತಾರೆ ನೋಡೋಣ ಎಂದು ಯತ್ನಾಳ್ ಪ್ರತ್ಯೇಕ ಹೋರಾಟವನ್ನು ಕೈಬಿಡುವಂತೆ ಮನವಿ ಮಾಡಿಕೊಂಡರು.
ಇನ್ನೂ ಮೂರು ಉಪಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ. ಏನು ಕೊರತೆ ಆಗಿದೆ ಎನ್ನುವ ಕುರಿತು ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ. ಇನ್ನೂ ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇವೆ. ಸೋಲಿಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣ ಎನ್ನುವ ಪ್ರಶ್ನೆ ಬರಲ್ಲ. ಎಲ್ಲರೂ ಸೇರಿ ಜವಾಬ್ದಾರಿ ಹೊರಬೇಕಾಗುತ್ತದೆ. ಏನು ಲೋಪ ಆಗಿದೆ ಎಂದು ಚರ್ಚೆ ಮಾಡುತ್ತೇವೆ ಎಂದು ಹೇಳಿದರು.