ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಪಾದಯಾತ್ರೆ ಪಾಲಿಟಿಕ್ಸ್ ಜೋರಾಗಿದೆ. ರಾಜಾಹುಲಿ & ಸನ್ ವಿರುದ್ಧ ಉತ್ತರ ಕರ್ನಾಟಕ ಬಿಜೆಪಿಯ ಜೋಡಿ ಹುಲಿಗಳು ಮುಗಿಬಿದ್ದಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸಮರ ಸಾರಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಜಾರಕಿಹೊಳಿ, ಯತ್ನಾಳ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ನಾಯಕರು ಬೆಳಗಾವಿಯಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಏನೆಲ್ಲಾ ಚರ್ಚೆ ನಡೀತು ಎಂಬಾ ಇನ್ಸೈಡ್ ಮಾಹಿತಿ ಇಲ್ಲಿದೆ ನೋಡಿ..
ಹೌದು.. ವೀಕ್ಷಕರೇ.. ರಾಜ್ಯ ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಮನೆಯೊಂದು ಮೂರು ಬಾಗಿಲು ಅನ್ನೋ ಪರಿಸ್ಥಿತಿ ಇತ್ತು. ವಿಪಕ್ಷದಲ್ಲೂ ಅದೇ ಪರಿಸ್ಥಿತಿ ಮುಂದುವರಿದಿದೆ. ಅದರಲ್ಲೂ ರಾಜ್ಯ ರಾಜಕಾರಣದ ಶಕ್ತಿ ಕೇಂದ್ರ ಬೆಳಗಾವಿಯಿಂದಲೇ ಬಿಜೆಪಿ ಭಿನ್ನಮತ ಶುರುವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರನನ್ನ ನಾವು ಒಪ್ಪಲ್ಲ, ಒಪ್ಪೋದು ಇಲ್ಲ ಎಂದಿದ್ದ ಗೋಕಾಕ ಸಾಹುಕಾರ್ ಹಾಗೂ ಯತ್ನಾಳಗೆ ಈಗ ಮತ್ತಷ್ಟು ಬಲ ಸಿಕ್ಕಿದೆ. ಮೈಸೂರು ಪಾದಯಾತ್ರೆ ಸಮಾರೋಪ ಬಳಿಕ ಬೆಳಗಾವಿಯಲ್ಲಿ ಸೇರಿದ ಹತ್ತಕ್ಕೂ ಹೆಚ್ಚು ಬಿಜೆಪಿ ನಾಯಕರು ಗೌಪ್ಯಸಭೆ ನಡೆಸಿದ್ದಾರೆ.
Garlic Side Effects: ಬೆಳ್ಳುಳ್ಳಿ ಹೆಚ್ಚಾಗಿ ತಿನ್ನಬಾರದು ಏಕೆ? ತಿಂದ್ರೆ ಏನಾಗುತ್ತೆ ಗೊತ್ತಾ?
ಬೆಳಗಾವಿ ಜಾಂಬೋಟಿ ರಸ್ತೆಯ ಖಾಸಗಿ ರೆಸಾರ್ಟ್ ನಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಅರವಿಂದ ಲಿಂಬಾವಳಿ, ಜಿ.ಎಂ.ಸಿದ್ದೇಶ್ವರ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಬಿಎಸ್ವೈ ಆಪ್ತ ಎನ್.ಆರ್.ಸಂತೋಷ್ ಸೇರಿದಂತೆ ಹತ್ತಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ರು. ಸಭೆಯಲ್ಲಿ ವಾಲ್ಮೀಕಿ ನಿಗಮ ಹಗರಣ ವಿರೋಧಿಸಿ ಕೂಡಲಸಂಗಮದಿಂದ ಬಳ್ಳಾರಿಯವರೆಗೂ ಪಾದಯಾತ್ರೆ ನಡೆಸುವ ಕುರಿತು ಚರ್ಚೆ ನಡೆಸಲಾಗಿದೆ.
ಇನ್ನು ದೀಪಾವಳಿ ಬಳಿಕ ಅಥವಾ ಸೆಪ್ಟೆಂಬರ್ 17 ರಂದು ಕೂಡಲ ಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ಮುಹೂರ್ತ ಫಿಕ್ಸ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನಾಯಕರೆಲ್ಲರೂ ಒಕ್ಕೋರಲಾಗಿ ಆಕ್ರೋಶ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಸಭೆಯ ಮಧ್ಯೆ ಹೊರಗೆ ಬಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅರವಿಂದ ಲಿಂಬಾವಳಿ ಇದು ಬಿಜೆಪಿ ಭಿನ್ನಮತ ಅಲ್ಲ ಅಥವಾ ಭಿನ್ನಮತ ನಾಯಕರ ಸಭೆಯೂ ಅಲ್ಲ. ವಾಲ್ಮೀಕಿ ನಿಗಮ ಹಗರಣ ಹಾಗೂ ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ ವಿರುದ್ಧ ಹೋರಾಟ ಬಗ್ಗೆ ಚರ್ಚೆ ನಡೆಯುತ್ತಿದೆ. ಸಭೆ ಬಳಿಕ ತೀರ್ಮಾನ ಮಾಡ್ತೇವೆ ಎಂದು ತಿಳಿಸಿದ್ದಾರೆ. ಒಟ್ನಲ್ಲಿ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಮುಂದೆ ಇದು ಯಾವ ಹಂತಕ್ಕೆ ತಲುಪುತ್ತೆ ಕಾದು ನೋಡಬೇಕಿದೆ.