ಬೆಂಗಳೂರು;- ಮಾಜಿ ಸಚಿವ ಡಿಬಿ ಚಂದ್ರೇಗೌಡರ ನಿಧನಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ BSY, ಹಿರಿಯ ನಾಯಕ, ಮಾಜಿ ಸಚಿವ, ರಾಜಕೀಯ ಮುತ್ಸದ್ಧಿ ಶ್ರೀ ಡಿ.ಬಿ.ಚಂದ್ರೇಗೌಡ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ಅವರು ಶಾಸಕರಾಗಿ, ಸಂಸದರಾಗಿ, ರಾಜ್ಯಸಭಾ ಸದಸ್ಯರಾಗಿ, ಕಾನೂನು ಸಚಿವರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬದವರಲ್ಲಿ, ಅಭಿಮಾನಿಗಳಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ವೈಯಕ್ತಿಕವಾಗಿ ಆತ್ಮೀಯ ಒಡನಾಡಿ ಒಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತಾ, ಕುಟುಂಬದವರಲ್ಲಿ ಸಂತಾಪ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.