ಬೆಂಗಳೂರು:- ಯತ್ನಾಳ್ ಹೊರಗಿನವರಲ್ಲ, ನಮ್ಮವರೇ ಎಂದು ಮಾಜಿ ಸಿಎಂ BS ಯಡಿಯೂರಪ್ಪ ಹೇಳಿದ್ದಾರೆ. ಈ ಹಿನ್ನೆಲೆ, ಬಿಜೆಪಿ ಶಾಸಕ ಫುಲ್ ಸೈಲೆಂಟ್ ಆಗಿದ್ದಾರೆ.
ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ. ಬರುವ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ನಮ್ಮ ಶಾಸಕರು ಜಾಗೃತಿ ಮೂಡಿಸಲಿದ್ದಾರೆ. ಮುಡಾ ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಎಲ್ಲ ವಿವರಗಳು ಹೊರಗೆ ಬರುತ್ತಿವೆ ಎಂದು ಹೇಳಿದರು. ಈ ಮೂಲಕ ಬಿಎಸ್ವೈ ಪರೋಕ್ಷವಾಗಿ ಯತ್ನಾಳ್ ದಾರಿಗೆ ಬರಲಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದರು.
ಬಸನಗೌಡ ಪಾಟೀಲ್ ಯತ್ನಾಳ್ ಬಂಡಾಯ ಪಕ್ಷಕ್ಕೆ ಹಾನಿಯಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಒಟ್ಟಾಗಿ ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತೇವೆ. ಏನೇ ಭಿನ್ನಾಭಿಪ್ರಾಯವಿದ್ದರೂ ಎದುರುಬದುರು ಕೂತು ಚರ್ಚಿಸಿ, ಒಟ್ಟಾಗಿ ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.