ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ 16 ನೇ ಬಜೆಟ್ ಮಂಡಿಸಲಿದ್ದು,ಈ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಇನ್ನೂ ಬಜೆಟ್ ಮಂಡನೆಗೂ ಮುನ್ನ ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದು ಬರೆದುಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ. ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ. ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ ಎಂದಿದ್ದಾರೆ.
ಇನ್ನೂ ಬಾರಿಯ ಬಜೆಟ್ ಹಂಚಿಕೆಯು 4 ಲಕ್ಷ ಕೋಟಿ ತಲುಪುವ ನಿರೀಕ್ಷೆ ಇದೆ. ಇಂದು ಬೆಳಗ್ಗೆ 10.15ರಂದು ಸಿಎಂ ಬಜೆಟ್ ಮಂಡಿಸಲಿದ್ದು, ಎಲ್ಲರ ಚಿತ್ತ ಸದ್ಯ ಬಜೆಟ್ ನತ್ತ ನೆಟ್ಟಿದೆ.