ಬೆಂಗಳೂರು:- ಚುನಾವಣೆ ದಿನ ಬಜೆಟ್ ಮಂಡನೆ ಸರಿಯಲ್ಲ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಚುನಾವಣೆ ದಿನದಂದು ರಾಜ್ಯ ಬಜೆಟ್ ಮಂಡಿಸುವುದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ತಿಳಿಸಿದೆ. ರಾಜಭವನದಲ್ಲಿ ಬುಧವಾರ ಈ ಕುರಿತು ರಾಜ್ಯಪಾಲರಿಗೆ ಬಿಜೆಪಿ ನಿಯೋಗವು ಮನವಿ ಸಲ್ಲಿಸಿತು.
ಬಳಿಕ ಮಾತನಾಡಿದ ಅಶ್ವಥ್ ನಾರಾಯಣ್, ಚುನಾವಣಾ ಆಯೋಗವು ಬೆಂಗಳೂರಿನ ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಜನವರಿ 23ರಂದು ಚುನಾವಣಾ ದಿನವನ್ನು ನಿಗದಿಪಡಿಸಿದೆ. ಫೆಬ್ರವರಿ 16ರಂದು ದಿನಾಂಕ ನಿಗದಿಯಾಗಿದೆ ಎಂದರು.
ಮತದಾನದ ದಿನವೇ ರಾಜ್ಯ ಸರ್ಕಾರದ ಬಜೆಟ್ ಮಂಡನೆ ಆಗಲಿದೆ. ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ ಪ್ರಕಾರ ಇದು ನ್ಯಾಯಬದ್ಧವಲ್ಲ. ಬಜೆಟ್ ದಿನವೇ ಚುನಾವಣೆ ಮಾಡುವ ಬದಲು ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಲು ಕೋರಲಾಗಿದೆ. ಬಿಜೆಪಿ ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸೂಚನೆ ಕೊಡಲು ಕೋರಿದ್ದೇವೆ ಎಂದು ತಿಳಿಸಿದರು
ಬಜೆಟ್ ಮಂಡನೆ ದಿನವನ್ನು ಮುಂದೂಡಬೇಕು. ಚುನಾವಣೆ ದಿನವೇ ಬಜೆಟ್ ಮಂಡಿಸದಂತೆ ಸೂಚಿಸಲು ಕೋರಿದ್ದೇವೆ. ರಾಜ್ಯ ಸರ್ಕಾರಕ್ಕೆ ಈ ಕುರಿತು ಸೂಚಿಸುವುದಾಗಿ ಮಾನ್ಯ ರಾಜ್ಯಪಾಲರೂ ತಿಳಿಸಿದ್ದಾರೆ. ಇದಲ್ಲದೇ ಚುನಾವಣಾ ಆಯೋಗಕ್ಕೂ ಮನವಿ ಕೊಡಲಿದ್ದೇವೆ. ಆ ದಿನ ಬಜೆಟ್ ಮಂಡಿಸಿದರೆ ಅದು ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂದು ಗಮನಕ್ಕೆ ತರಲಾಗಿದೆ ಎಂದು ವಿವರಣೆ ನೀಡಿದರು.