ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.
2ನೇ ಮದುವೆಗೆ ಸಜ್ಜಾದ ‘ಜೊತೆ ಜೊತೆಯಲಿ’ ಮೀರಾ: ಮೊದಲ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ನಟಿ
ಕೇಂದ್ರದಿಂದ ಪ್ರಧಾನಿ ಮೋದಿ ಅವರು, ಈ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಎಕ್ಸ್ನಲ್ಲಿ ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.
ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ.